ರಾಜ್ಯ

ಕೊರೊನಾ ರೂಪಾಂತರ: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ-ದಿನೇಶ್ ಗುಂಡೂರಾವ್ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಅವರು
60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು. ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಕೇರಳದಿಂದ ಬರುವವರ ಮೇಲೆ ಹೆಚ್ಚು ಟೆಸ್ಟ್ ಮಾಡುವಂತೆ ಆದೇಶ ಮಾಡಿದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!