ಕರಾವಳಿ

ಮಂಗಳೂರು: ಶಂಕಿತ ಡೆಂಗ್ಯೂ ಜ್ವರದಿಂದ ಯುವಕ ಮೃತ್ಯು



ಮಂಗಳೂರು: ಯುವಕನೋರ್ವ ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಉಳ್ಳಾಲ ಹರೇಕಳ ನ್ಯೂಪಡ್ಪುನಲ್ಲಿ ವರದಿಯಾಗಿದೆ.

ಸದ್ಯ ನಾಟೆಕಲ್‌ ನಲ್ಲಿ ನೆಲೆಸಿದ್ದ ನವಾಝ್‌ (32. ವ) ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟವರು.

ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್‌ ಗೆ ಜ್ವರ ತೀವ್ರವಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಒಂದು ವರ್ಷದ ಮಗುವಿದೆ.

ಮೃತರು ಮಂಗಳೂರಿನ ಬಂದರು ಪ್ರದೇಶದಲ್ಲಿರುವ ಜಿ ಎಲ್‌ ಜಿ ಫಿಶರೀಸ್‌ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!