ಮಹಿಳೆಯರನ್ನು ಅವಮಾನಿಸಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ WIMನಿಂದ ಪುತ್ತೂರು ಹಾಗೂ ಉಪ್ಪಿನಂಗಡಿ ಠಾಣೆಗೆ ದೂರು
ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಮುಸ್ಲಿಂ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ರೀತಿಯಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ ಎಂಬಾತನ ವಿರುದ್ದ ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪುತ್ತೂರು ನಗರ ಹಾಗೂ ಉಪ್ಪಿನಂಗಡಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ.
ಪುತ್ತೂರು ಠಾಣೆಗೆ WIM ಪುತ್ತೂರು ವಿಧಾನಸಭಾ ಅಧ್ಯಕ್ಷೆಯಾದ ಝಾಹಿದ ಸಾಗರ್ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ ಕಾರ್ಯದರ್ಶಿ ಸೌಧ ಮಠ ರವರು ದೂರು ನೀಡಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.