ಕೋವಿಡ್ ಪಾಸಿಟಿವ್ ದೃಢಪಟ್ಟರೆ ಏಳು ದಿನ ಹೋಮ್ ಐಸೊಲೇಷನ್ ಕಡ್ಡಾಯ-ದಿನೇಶ್ ಗುಂಡೂರಾವ್
ಬೆಂಗಳೂರು: ಕೋವಿಡ್ ಪಾಸಿಟಿವ್ ದೃಢಪಟ್ಟರೆ ಏಳು ದಿನ ಹೋಮ್ ಐಸೊಲೇಷನ್ ಕಡ್ಡಾಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸೋಂಕಿತರ ಮನೆಗಳಿಗೆ ಸರಕಾರಿ ವೈದ್ಯರು ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ ಪಾಸಿಟಿವ್ ದೃಢಪಟ್ಟವರು 7 ದಿನ ಹೋಮ್ ಐಸೊಲೇಷನ್‌ನಲ್ಲಿ ಇರಬೇಕು. ಸೋಂಕು ದೃಢಪಟ್ಟ ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ 7 ದಿನಗಳ ರಜೆ ಕೊಡಬೇಕು. ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವರೆಗೆ ರಜೆ ಕೊಡಿಸುವ ಕುರಿತು ಸರಕಾರದಿಂದ ಮಾರ್ಗಸೂಚಿ ಹೊರಡಿಸಬೇಕು ಎಂದು ಅವರು ಹೇಳಿದ್ದಾರೆ.