ಕರಾವಳಿಕ್ರೈಂ

ಸುಳ್ಯ: ಜಾಲ್ಸೂರು ಬಳಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು



ಜಾಲ್ಸೂರು: ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಡಿ.28ರಂದು ನಡೆದಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಜಾಲ್ಸೂರು ಚೆಕ್ ಪೋಸ್ಟ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರು ಕಡೆಯಿಂದ ಬಂದ ಬೈಕ್ ಪುರುಷೋತ್ತಮ ಅವರಿಗೆ ಡಿಕ್ಕಿ ಹೊಡೆದಿದೆ.

ತಲೆಗೆ ತೀವ್ರವಾದ ಏಟಾಗಿದ್ದು, ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯುತ್ತಿದ್ದ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!