ಯತ್ನಾಳ್ ವಿರುದ್ದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಪರೋಕ್ಷ ವಾಗ್ದಾಳಿ
ಕೆಲವರು ಸಮಾಜ ಒಡೆದು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಕೆಲವರು ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಪ್ರಯತ್ನಿಸಿದರು. ಸಮಾಜ ಒಡೆದು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡಿದ್ದಾರೆ. ನಾನು ಕಾರ್ಯಕ್ರಮಕ್ಕೆ ಬರದಂತೆ ತಡೆಯಲು ಕೆಲವರು ಬಹಳ ಪ್ರಯತ್ನಿಸಿದರು. ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು, ಕಟ್ಟುವ ಕೆಲಸ ಮಾಡಬೇಕು ಎಂದು ಪರೋಕ್ಷವಾಗಿ ಬಸನಗೌಡ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.