ಉಡುಪಿ: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ ನ್ಯಾಯಾಂಗ ಬಂಧನ ಅವಧಿಯನ್ನು ಜ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶೆ ಮುಂದೆ ಹಾಜರುಪಡಿಸಲಾಯಿತು.
ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶ ನೀಡಿದರು.