ಯುವನಿಧಿ ಯೋಜನೆ: ಇದುವರೆಗೆ ನೋಂದಣಿ ಮಾಡಿಕೊಂಡವರ ಸಂಖ್ಯೆಯೆಷ್ಟು ಗೊತ್ತೇ..?
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ನೋಂದಣಿಗೂ ಚಾಲನೆ ದೊರಕಿದ್ದು ಯುವನಿಧಿ ಯೋಜನೆಗೆ ಇದುವರೆಗೆ ಒಟ್ಟು 19,392 ಯುವಕರು ನೋಂದಣಿ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಯುವನಿಧಿ ನೋಂದಣಿ ಪ್ರಕ್ರಿಯೆಗೆ ಡಿ.26ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಜನವರಿ 12ರಂದು ಶಿವಮೊಗ್ಗದಲ್ಲಿ ಈ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದ್ದು ಬಳಿಕ ಯೋಜನೆಯ ಅರ್ಹ ಯುವಕರ ಖಾತೆಗೆ ನೇರವಾಗಿ ಹಣ ಜಮೆ ಆಗಲಿದೆ.