ಕ್ರಿಕೆಟಿಗ ಸಚಿನ್ ತೆಂಡೂಲ್ಕರ್-ಸಿಎಂ ಸಿದ್ದರಾಮಯ್ಯ ಭೇಟಿ
ಕ್ರಿಕೆಟ್‌ನ ದಂತಕಥೆ, ಸಚಿನ್ ತೆಂಡೂಲ್ಕರ್ ಅವರು ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಭೇಟಿ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಮಾತನಾಡಿ ಬೀಳ್ಕೊಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.