ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಆರೋಪಿಯನ್ನು ಬಂಧಿಸಿದ ಪೊಲೀಸರು
ಅಂಗನವಾಡಿ ಮಕ್ಕಳು ಹೂ ಕಿತ್ತರೆಂಬ ಕಾರಣಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಕಲ್ಯಾಣಿ ಮೋರೆ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಜ.1ರಂದು ಅಂಗನವಾಡಿ ಮಕ್ಕಳು ತನ್ನ ಮನೆಯ ಬಳಿಯಿಂದ ಹೂ ಕಿತ್ತರೆನ್ನುವ ಕಾರಣಕ್ಕೆ ಮನೆ ಮಾಲೀಕ ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ ಜತೆಗೆ ಜಗಳವಾಡಿ ಅಂಗನವಾಡಿ ಸಹಾಯಕಿಯ ಮೂಗನ್ನು ಕುಡುಗೋಲಿನಿಂದ ಕತ್ತರಿಸಿದ್ದನು.