ಕರಾವಳಿಕ್ರೈಂ

ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ನಗ ನಗದು ಕಳ್ಳತನ



ಕಡಬ: ಮನೆ ಮಂದಿ ಮನೆಗೆ ಬೀಗ ಹಾಕಿ ಆತೂರು ದ್ಸಿಕ್ರ್ ಹಲ್ಕಾ ವಾರ್ಷಿಕ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಜ.4ರಂದು ತಡರಾತ್ರಿ ನಡೆದಿದೆ.

ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯ ಬೀಗ ಮುರಿದ ಕಳ್ಳರು, ನಗ ಹಾಗೂ ನಗದನ್ನು ದೋಚಿದ್ದಾರೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!