ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮೂವರು ಸಚಿವರನ್ನು ಅಮಾನತುಗೊಳಿಸಿದ ಮಾಲ್ಡೀವ್ಸ್ ಸರಕಾರ
ಮಾಲ್ಡೀವ್ಸ್ ಸರಕಾರ ತನ್ನ ಮೂವರು ಸಚಿವರನ್ನು ಅಮಾನತುಗೊಳಿಸಿದೆ. ಇದಕ್ಕೆ ಕಾರಣ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಾಗಿ. ಮೋದಿಯವರ ಇತ್ತೀಚಿನ ಲಕ್ಷದ್ವೀಪ ಪ್ರವಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಹಂಚಿಕೊಂಡ ಮೂವರು ಸಚಿವರನ್ನು ಅಮಾನತು ಮಾಡಲಾಗಿದೆ.
ಭಾರತವು ದ್ವೀಪ ರಾಷ್ಟ್ರದೊಂದಿಗೆ ಈ ಗಂಭೀರ ವಿಚಾರವನ್ನು ಪ್ರಸ್ತಾಪಿಸಿದ ನಂತರ ಸಚಿವರಾದ ಮಲ್ಶಾ ಶರೀಫ್, ಮರಿಯಮ್ ಶಿಯುನಾ ಮತ್ತು ಅಬ್ದುಲ್ಲಾ ಮಹಜೂಮ್ ಮಜೀದ್ ಅವರನ್ನು ತಮ್ಮ ಸ್ಥಾನಗಳಿಂದ ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಯ ಚಿತ್ರಗಳನ್ನು ಪೋಸ್ಟ್ ಮಾಡಿದ ನಂತರ ಮತ್ತು ಭಾರತೀಯರಿಗೆ ಪ್ರವಾಸಿ ತಾಣವಾಗಿ ದ್ವೀಪವನ್ನು ಪ್ರವಾಸಿ ತಾಣವಾಗಿ ಬೆಳೆಸಬೇಕೆಂದು ಕರೆ ನೀಡಿದ ಬಳಿಕ, ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಬರಹ ಬರೆದಿದ್ದರು.