ರಾಷ್ಟ್ರೀಯ

ಬಿಲ್ಕಿಸ್ ಬಾನು ಪ್ರಕರಣ: 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್



ಬಿಲ್ಕಿಸ್ ಬಾನು ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಪರಾಧಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಸಲ್ಲಿಸಿರುವ ಅರ್ಜಿಯು ಮಾನ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಅರ್ಜಿ ವಿಚಾರಣೆ ಮುಂದುವರಿಯುವುದು ಎಂದು ಸುಪ್ರೀಂ ಹೇಳಿದೆ. ಇದರ ಜತೆಗೆ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳುಹಿಸುವಂತೆ ಹೇಳಿದೆ.

2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು ಅಪರಾಧಿಗಳನ್ನು ಬಿಡುಗಡೆ ಮಾಡಿತು. ಈ ಆದೇಶವು ವಿರೋಧ ಪಕ್ಷ ಹಾಗೂ ಸಾರ್ವಜನಿಕರ ವ್ಯಾಪಕ ಖಂಡನೆ ಹಾಗೂ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಅವರು ಸುಪ್ರೀಂ ಮೆಟ್ಟಿಲೇರಿದ್ದರು.

Leave a Reply

Your email address will not be published. Required fields are marked *

error: Content is protected !!