ಜಿಲ್ಲೆ

ಮಂಗನ ಕಾಯಿಲೆಗೆ ಯುವತಿ ಬಲಿ



ಮಂಗನ ಕಾಯಿಲೆಗೆ ಯುವತಿ ಬಲಿಯಾಗಿದ್ದಾಳೆ. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ 18 ವರ್ಷದ ಯುವತಿಯೋರ್ವಳು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು ಎನ್ನಲಾಗಿದೆ.

ಮೆಗ್ಗಾನ್ ಆಸ್ಪತ್ರೆಯಿಂದ ಯುವತಿಯನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಜ.8ರಂದು ಬೆಳಗ್ಗೆ ಯುವತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!