ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಜಗದೀಶ್ ಶೆಟ್ಟರ್ ಹೇಳಿದ್ದೇನು..?
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ವಿಚಾರದ ಬಗ್ಗೆ ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿರುವ ಮಧ್ಯೆ ಇದೀಗ ಜಗದೀಶ್ ಶೆಟ್ಟರ್ ಸ್ಪಷ್ಟನೆ ಕೊಟ್ಟಿದ್ದಾರೆ.
ಲೋಕಸಭೆ ಚುನಾವಣೆ ತಯಾರಿ ಕುರಿತು ಕಾಂಗ್ರೆಸ್ ಸಭೆಗೂ ಮುಂಚೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆ ಕಾರ್ಯಕರ್ತರನ್ನು ಸೇರಿಸಿ ಮಾರ್ಗದರ್ಶನ ಮಾಡುವ ಸಭೆ ಇದು. ಜ. 10ಕ್ಕೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು, ಸಿಎಂ ಸಭೆ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿದೆ. ಟಿಕೆಟ್ ಆಕಾಂಕ್ಷಿಗಳು, ಅಭ್ಯರ್ಥಿಗಳ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ಆಗುತ್ತದೆ ಎಂದು ಹೇಳಿದ್ದಾರೆ.