ಕರಾವಳಿ

ಸುಳ್ಯ: ಅಡ್ಕಬಳೆಯಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಅಳವಡಿಕೆ

ಸುಳ್ಯ: ತಾಲೂಕಿನ ಅರಂತೋಡು ಗ್ರಾಮದ ಅಡ್ಕಬಳೆಯಲ್ಲಿ ಅರಣ್ಯದಂಚಿನ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ದಾಳಿ ನಡೆಯುತ್ತಿದ್ದು ಇದೀಗ ಅರಣ್ಯ ಇಲಾಖೆ ವತಿಯಿಂದ ಚಿರತೆಯನ್ನು ಹಿಡಿಯಲು ಬೋನು ಇರಿಸಲಾಗಿದೆ.

ಕಳೆದ‌ ಕೆಲವು ದಿನಗಳಿಂದ ಈ ಭಾಗದಲ್ಲಿ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ಮಾಡಿತ್ತು. ಆಡನ್ನು ಕೊಂದು ಅರ್ಧ ತಿಂದ ಸ್ಥಿತಿಯಲ್ಲಿ ಆಡಿನ ಮೃತದೇಹ ಪತ್ತೆಯಾಗಿತ್ತು. ಕರುವಿನ ಮೇಲೆ ಚಿರತೆ ದಾಳಿ ಮಾಡಿತ್ತು. ಇದು ಚಿರತೆ ದಾಳಿ ಎನ್ನಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಸುಳ್ಯ ವಲಯ ಅರಣ್ಯಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಅರಣ್ಯ ಇಲಾಖೆ ಅಡ್ಕಬಳೆಯಲ್ಲಿ ಚಿರತೆ ಬಂದ ಪ್ರದೇಶದಲ್ಲಿ ಕಬ್ಬಿಣದ ಬೋನ್ ಇರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!