ತಲೆ ದಿಂಬುವಿನಿಂದ ಉಸಿರುಗಟ್ಟಿಸಿ ಮಗುವನ್ನು ಕೊಂದರೇ ಸುಚನಾ ಸೇಠ್..?
ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆ ಮಾಡಿರುವ ಸುಚನಾ ಸೇಠ್ ತನಿಖೆ ನಡೆಯುತ್ತಿದ್ದು ಮಹತ್ವದ ಅಂಶ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಪತಿ ವೆಂಕಟರಮಣ ತನ್ನ ನಾಲ್ಕು ವರ್ಷದ ಮಗನನ್ನು ಭೇಟಿಯಾಗಬಾರದು ಎಂದು ಮಗನನ್ನೇ ಹತ್ಯೆ ಮಾಡಿ ಶವವನ್ನು ಸೂಟ್ಕೇಸ್ನಲ್ಲಿ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಆರೋಪಿ ಮಹಿಳೆ ಸುಚನಾ ಸೇಠ್ ಚಿತ್ರದುರ್ಗದಲ್ಲಿ ಸಿಕ್ಕಿಬಿದ್ದಿದ್ದಳು.
ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದೆ ಎನ್ನಲಾಗುತ್ತಿದ್ದು 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದ್ದು ತಲೆ ದಿಂಬು ಅಥವಾ ಬೇರೆ ಇನ್ಯಾವುದೋ ವಸ್ತು ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಉಸಿರುಗಟ್ಟಿಸಿದ ಕಾರಣ ಮಗುವಿನ ಮುಖ, ಎದೆಭಾಗ ಊದಿಕೊಂಡಿದೆ. ಹೀಗಾಗಿ ಮಗುವಿನ ಮೂಗಿನಿಂದ ರಕ್ತಸ್ರಾವವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಸ್ಪಷ್ಟ ಮಾಹಿತಿ ನಿರೀಕ್ಷಿಸಲಾಗಿದೆ.