ರಾಜಕೀಯರಾಷ್ಟ್ರೀಯ

ಅಮಿತ್ ಶಾ ಭೇಟಿಯಾದ ಈಶ್ವರಪ್ಪನವದೆಹಲಿ: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಈ ವೇಳೆ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪುತ್ರ ಕಾಂತೇಶ್ನನ್ನು ಕಣಕ್ಕಿಳಿಸಲು ಹಾವೇರಿ ಟಿಕೆಟ್ ಗೆ ಲಾಬಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಎಸ್ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದ ಬಗ್ಗೆ ಸಮಲೋಚನೆ ಮಾಡಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿನ ಗೊಂದಲಗಳ ಬಗ್ಗೆಯೂ ವರಿಷ್ಠರ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!