ಮತೀಯ ಗೂಂಡಾಗಿರಿ ವಿರುದ್ದ ಕಟ್ಟು ನಿಟ್ಟಿನ ಕ್ರಮ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಮತೀಯ ಗೂಂಡಾಗಿರಿ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ, ಅಂತಹ ಘಟನೆಗಳನ್ನು ಹತ್ತಿಕ್ಕಲಾಗುವುದು. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು ತಪ್ಪಿತಸ್ಥರು ಯಾರೇ ಆದರೂ ಸುಮ್ಮನೆ ಬಿಡುವ ಪ್ರಶ್ನೆಯಿಲ್ಲ ಎಂದು ಗೃಹ ಸಚಿವ ಡಾ.ಜಿ,ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತೀಯ ಗೂಂಡಾಗಿರಿ ಎಲ್ಲಿ ನಡೆದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.