ಕರಾವಳಿ

ಜ 21: ಮಂಗಳೂರಿನಲ್ಲಿ ಸಂವಿಧಾನ ಶಿಲ್ಪಿಯ ಪುನರಾವಲೋಕನ ವಿಶೇಷ ಶಿಬಿರ: ಪತ್ರಕರ್ತರಾದ ಹಸೈನಾರ್ ಜಯನಗರ, ಸಿಶೇ ಕಜೆಮಾರ್ ಗೆ ಸನ್ಮಾನಸ್ವರ ಮಾಧುರ್ಯ ಸಂಗೀತ ಬಳಗ ಪುತ್ತೂರು ಇದರ ವತಿಯಿಂದ ಕರ್ನಾಟಕ ಸರ್ಕಾರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಮಂಗಳೂರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮಂಗಳೂರು,ಕನ್ನಡ ವಿಭಾಗ, ವಿಶ್ವವಿದ್ಯಾನಿಲಯ ಹಂಪನಕಟ್ಟೆ ಇದರ ಸಂಯುಕ್ತಾಶ್ರಯದಲ್ಲಿ ‘ಸಂವಿಧಾನ ಶಿಲ್ಪಿಯ ಪುನರಾವಲೋಕನ ವಿಶೇಷ ಶಿಬಿರ’ ಹಾಗೂ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ರವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ಜನವರಿ 21ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 9.30 ರಿಂದ ಸಂಜೆ 4:30 ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು 9:30 ರಿಂದ 11 ಗಂಟೆಯವರೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಪ್ರಯೋಜಕತ್ವದಲ್ಲಿ ಪುತ್ತೂರು ಸ್ವರ ಮಾಧುರ್ಯ ಸಂಗೀತ ಬಳಗ ವತಿಯಿಂದ ಕನ್ನಡ ಗೀತ ಗಾಯನ ಕಾರ್ಯಕ್ರಮ ಬಿ ಜನಾರ್ಧನ್ ಮತ್ತು ಬಳಗದವರಿಂದ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್ ವಹಿಸಲಿದ್ದಾರೆ.
ಮಂಗಳೂರು ಮಹಾ ನಗರ ಪಾಲಿಕೆ ಮಹಾಪೌರರಾದ ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಎ ಸಿ ವಿನಯ್ ರಾಜ್,ಊರ್ವ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಶ್ರೀಮತಿ ಭಾರತಿ, ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪೂರ್ವಾಹ್ನ 11 ಗಂಟೆಗೆ ಶಿಬಿರದ ಉದ್ಘಾಟನೆ ನಡೆಯಲಿದ್ದು ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್ ಸಿ ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಗೌರವ ಉಪಸ್ಥಿತರಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಯರಾಜ್ ಅಮೀನ್, ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಮಾನ್ಯ ಮುಖ್ಯಮಂತ್ರಿಯವರ ಉಪ ಕಾರ್ಯದರ್ಶಿ ಅರುಣ್ ಪುರ್ಟಾಡೊ, ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಮಂಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ, ಪುತ್ತೂರು ಸುಧಾನ ಶಿಕ್ಷಣ ಸಂಸ್ಥೆ ಸಂಚಾಲಕ ರೇ ವಿಜಯ ಹಾರ್ವಿನ್, ಮಾಜಿ ಅಪರ ಜಿಲ್ಲಾ ಸರ್ಕಾರಿ ವಕೀಲರಾದ ಮನೋರಾಜ್ ರಾಜೀವ, ಸುಳ್ಯ ನಗರ ಪಂಚಾಯತಿ ಸದಸ್ಯ ಹಿರಿಯ ವಕೀಲರಾದ ಎಂ ವೆಂಕಪ್ಪಗೌಡ ಮೊದಲಾದವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮೈಸೂರು ಧ್ವನಿ ಫೌಂಡೇಶನ್ ಸಂಸ್ಥಾಪಕರಾದ ಡಾ. ಶ್ವೇತ ಮಡಪ್ಪಾಡಿ ರವರಿಂದ ಡಾ. ಬಿ ಆರ್ ಅಂಬೇಡ್ಕರ್‌ರವರ ವಿಚಾರಧಾರೆಗಳ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದ ಸಾಧಕರಿಗೆ ಸೇವಾ ಗೌರವವನ್ನು ನೀಡಿ ಸನ್ಮಾನಿಸಲಾಗುತ್ತಿದ್ದು
ಮಾಧ್ಯಮ ಕ್ಷೇತ್ರದಿಂದ ಹಸೈನಾರ್ ಜಯನಗರ ಸುಳ್ಯ, ಸಿ ಶೇ ಕಜೆಮಾರ್,ಸಮಾಜ ಸೇವೆ ಬಿ ಕೆ ಸೇಸಪ್ಪ ಬೆದ್ರೆಕಾಡ್,ಸಂಗೀತ ಕೃಷ್ಣರಾಜ್ ಸುಳ್ಯ,ಬಾಲ ಪ್ರತಿಭೆ ಅಸ್ಮಿತ್ ಎ ಜೆ,ಚಿತ್ರಕಲೆ ಜಗನ್ನಾಥ್ ಅರಿಯಡ್ಕ ಇವರುಗಳು ಸೇವಾ ಗೌರವ ಸನ್ಮಾನ ಸ್ವೀಕರಿಸಲಿದ್ದಾರೆ.
ಮಧ್ಯಾಹ್ನ 2:30 ರಿಂದ 3:30ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಂಗಳೂರು ಆರನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಪೂಜಾ ಶ್ರೀ ಎಚ್ ಎಸ್ ಇವರ ಗೌರವ ಉಪಸ್ಥಿತಿಯಲ್ಲಿ ‘ಸಂವಿಧಾನ ಕಾನೂನು’ ಎಂಬ ವಿಷಯದಲ್ಲಿ ಕಾನೂನು ಮಾಹಿತಿ ಕಾರ್ಯಗಾರ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಕೀಲರಾದ ಮೋಹನ್ ದಾಸ ರೈ ಭಾಗವಹಿಸಲಿದ್ದಾರೆ. ಸಂಜೆ 3:30 ರಿಂದ 4:30ರ ವರೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾಮಾಜಿಕ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!