ಉದ್ಘಾಟನೆ ನಂತರ ಕುಟುಂಬ ಸಮೇತ ರಾಮ ಮಂದಿರಕ್ಕೆ ಭೇಟಿ ನೀಡುತ್ತೇನೆ: ಕೇಜ್ರಿವಾಲ್
ರಾಮ ಮಂದಿರಕ್ಕೆ ಭೇಟಿ ನೀಡುವುದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಜನವರಿ 22ರ ಉದ್ಘಾಟನಾ ಸಮಾರಂಭದ ನಂತರ ತಮ್ಮ ಕುಟುಂಬದೊಂದಿಗೆ ರಾಮ ಮಂದಿರಕ್ಕೆ ಭೇಟಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದು ನಾನು ನನ್ನ ಹೆಂಡತಿ, ಮಕ್ಕಳು ಮತ್ತು ಪೋಷಕರೊಂದಿಗೆ ರಾಮ ಮಂದಿರಕ್ಕೆ ಹೋಗಲು ಬಯಸುತ್ತೇನೆ. ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ನಾವು ಹೋಗುತ್ತೇವೆ ಎಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ.
ಆಮಂತ್ರಣ ಪತ್ರಿಕೆಯ ಪ್ರಕಾರ ಒಬ್ಬರಿಗೆ ಮಾತ್ರ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಇಷ್ಟೊಂದು ವಿವಿಐಪಿಗಳು ಇರುವುದರಿಂದ ಅವರ ಮೇಲೆ ಹೆಚ್ಚಿನ ಭದ್ರತೆಯನ್ನು ಕೇಂದ್ರೀಕರಿಸಲಾಗುವುದು ಎಂದು ಅವರು ಹೇಳಿದರು.
ಮುಖ್ಯಮಂತ್ರಿ ತೀರ್ಥ ಯಾತ್ರಾ ಯೋಜನೆ ಅಡಿಯಲ್ಲಿ, ದೆಹಲಿ ಸರ್ಕಾರವು ಪುರಿ, ರಾಮೇಶ್ವರಂ, ಅಯೋಧ್ಯೆ, ಗೋಲ್ಡನ್ ಟೆಂಪಲ್, ಅಜ್ಮೀರ್ ಷರೀಫ್ ದರ್ಗಾ, ಇತ್ಯಾದಿಗಳನ್ನು ಒಳಗೊಂಡಂತೆ ದೇಶದ ವಿವಿಧ ಧಾರ್ಮಿಕ ಸ್ಥಳಗಳಿಗೆ ಸಂಪೂರ್ಣ ಸರ್ಕಾರಿ ಅನುದಾನಿತ ತೀರ್ಥಯಾತ್ರೆಗೆ ಹಿರಿಯ ನಾಗರಿಕರನ್ನು ಕಳುಹಿಸುತ್ತದೆ. ಅಯೋಧ್ಯೆಗೆ ವಿಶೇಷ ರೈಲು ಸೇವೆಗೆ ದೆಹಲಿ ಸರ್ಕಾರ ಪ್ರಯತ್ನಿಸುತ್ತದೆ ಎಂದು ಕೇಜ್ರಿವಾಲ್ ಹೇಳಿದರು.