ಕರಾವಳಿ

ಮೇನಾಲ ಮಧುರಾ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ಕ್ರೀಡಾಕೂಟ

ಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ಕ್ರೀಡಾಕೂಟವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಫೌಝಿಯಾ,
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಿಸ್ರಿಯಾ ಮಧುರಾ,
ಸಂಸ್ಥೆಯ ಆಡಳಿತಾಧಿಕಾರಿ ಅಬ್ದುಲ್ ರೆಹಮಾನ್, ಸಹಾಯಕ ಮುಖ್ಯ ಶಿಕ್ಷಕಿ ಶ್ವೇತ ಮರಿಯಾ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ನಂತರ ವಿಧ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿದ್ಯಾರ್ಥಿ ನಾಯಕಿ
ಫಾತಿಮತ್ ಮುಭಾಶಿರ ಪ್ರತಿಜ್ಞಾ ಸ್ವೀಕಾರ ವಿಧಿಯನ್ನು ನಡೆಸಿಕೊಟ್ಟರು.
ಗಿಡಕ್ಕೆ ನೀರು ಹಾಕುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಫೌಝಿಯಾ ಇಬ್ರಾಹಿಂ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.


ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಅಥ್ಲಟಿಕ್ಸ್ ಆಯೋಜಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಂಸ್ಥೆಯ ಶಿಕ್ಷಕಿ ಶಫ್ರಿನಾ ಪಿ.ವಿ ಸ್ವಾಗತಿಸಿ, ಶಿಕ್ಷಕಿ ಪ್ರತೀಕ್ಷ ವಂದಿಸಿದರು ,ಹಾಗೂ ಶಿಕ್ಷಕಿ ಶೇಕ್ ಝಹಿರಾ ಬಾನು ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!