ಕರಾವಳಿಕ್ರೈಂ

ಬೆಳ್ತಂಗಡಿ: ಮಹಿಳೆ ಆತ್ಮಹತ್ಯೆ



ಬೆಳ್ತಂಗಡಿ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ಅಳದಂಗಡಿ ಸಮೀಪದ ಕುಬಲಾಜೆಯಲ್ಲಿ ನಡೆದಿದೆ. ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32.ವ) ಆತ್ಮಹತ್ಯೆಗೆ ಶರಣಾದವರು.

ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!