ರಾಜ್ಯರಾಷ್ಟ್ರೀಯ

ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ: ಹೆಚ್.ಡಿ ಕುಮಾರಸ್ವಾಮಿ ಹರ್ಷ



ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಬಗ್ಗೆ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ, ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನೆರವೇರುತ್ತಿದೆ. ಈ ಎಲ್ಲಾ ಕರಸೇವಕರ ಪರಿಶ್ರಮದ ಫಲದಿಂದ ಇಂತಹ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗುವ ಪುಣ್ಯ ನನಗೆ ದಕ್ಕಿದೆ ಮತ್ತು ಶ್ರೀರಾಮ ದೇವರಿಗೆ ಭಕ್ತಿ ಸಮರ್ಪಣೆ ಮಾಡುವ ಸುದೈವವೂ, ಅವಕಾಶವು ನನ್ನದಾಗಿದೆ. ಎಲ್ಲ ಕರಸೇವಕರನ್ನೂ ಸ್ಮರಿಸುತ್ತಾ, ಈ ಸುಸಂದರ್ಭದಲ್ಲಿ ಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!