ಜನರ ಬಳಿಗೆ ತೆರಳಿ ಸಮಸ್ಯೆ ಪರಿಹಾರ ಮಾಡುವುದು ಜನತಾ ದರ್ಶನದ ಉದ್ದೇಶ-ದಿನೇಶ್ ಗುಂಡುರಾವ್
ಸುಳ್ಯ: ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಸದಾ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಹೇಳಿದ್ದಾರೆ.

ಜ.23ರಂದು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರವೇ ಜನರ ಬಳಿಗೆ ತೆರಳಿ ಸಮಸ್ಯೆ ಪರಿಹಾರ ಮಾಡುವುದು ಜನತಾ ದರ್ಶನದ ಉದ್ದೇಶ. ಸರಕಾರ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ ಎಂದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್, ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ, ತಹಶೀಲ್ದಾರ್ ಜಿ.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.