ಕರಾವಳಿಕ್ರೈಂ

ನೇತ್ರಾವತಿ ಸೇತುವೆ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವು



ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ಜ.23ರ ತಡರಾತ್ರಿ ವೇಳೆ ಸಂಭವಿಸಿದೆ. ಬಾಗಲಕೋಟೆ ನಿವಾಸಿ ಸುರೇಶ್ (30.ವ) ಮೃತಪಟ್ಟವರು.

ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದ ಸುರೇಶ್ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ ಹೋಗುತ್ತಿದ್ದ ವೇಳೆ ತಡರಾತ್ರಿ ಬೈಕ್ ಡಿವೈಡರ್ ಗೆ ಬಡಿದು ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!