ರಾಜಕೀಯರಾಜ್ಯ

ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರ್ಪಡೆಗೊಂಡ ಜಗದೀಶ್ ಶೆಟ್ಟರ್ ಹೇಳಿದ್ದೇನು ಗೊತ್ತಾ..?



ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರೀಯ ನಾಯಕರ ಸಹಿತ ರಾಜ್ಯ ನಾಯಕರ, ಕಾರ್ಯರ್ತರ ಅಪೇಕ್ಷೆಯ ಮೇರೆಗೆ ಮತ್ತೆ ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ರಾಷ್ಟ್ರೀಯ ನಾಯಕರು ಬಹಳ ಪ್ರೀತಿಯಿಂದ ವಾಪಸ್ ಸೇರ್ಪಡೆಗೊಳಿಸಿದ್ದು ನನಗೆ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿ ಕೆಲಸ ಮಾಡುತ್ತಿದ್ದು ಆ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿದ್ದು ಅದನ್ನು ಸ್ವೀಕರಿಸಬೇಕೆಂದು ಸಭಾಪತಿ ಹೊರಟ್ಟಿ ಅವರಲ್ಲಿ ಮನವಿ ಮಾಡಿದ್ದೇನೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದನ್ನು ಕೆಪಿಸಿಸಿಗೆ ಕಳುಹಿಸಿದ್ದೇನೆ ಎಂದು ತಿಳಿಸಿದರು. ಕಳೆದ 10 ವರ್ಷಗಳಿಂದ ಪ್ರಧಾನಿ ಮೋದಿ ಅವರು ದೇಶಕ್ಕೆ ಉತ್ತಮ ಆಡಳಿತದ ಮೂಲಕ ಶಕ್ತಿ ನೀಡುತ್ತಿದ್ದು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಮತ್ತು ಬಿಜೆಪಿ ಇನ್ನಷ್ಟು ಶಕ್ತಿಯುತವಾಗಿ ಕಟ್ಟಬೇಕು ಎನ್ನುವ ಉದ್ದೇಶದಿಂದ ಬಿಜೆಪಿಗೆ ವಾಪಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!