ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ದಂಪತಿ
ಬೈಂದೂರಿನ ಅನುದೀಪ್ ಹಾಗೂ ಮಿನುಷಾ ದಂಪತಿಗೆ ಈ ವರ್ಷ ದಿಲ್ಲಿಯಲ್ಲಿ ನಡೆಯುವ ಗಣ ರಾಜ್ಯೋತ್ಸವದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಕಚೇರಿಯಿಂದ ಆಹ್ವಾನ ಬಂದಿದ್ದು, ಅವರು ಹೊಸದಿಲ್ಲಿಗೆ ತೆರಳಿದ್ದಾರೆ.

2020ರ ನವೆಂಬರ್‌ನಲ್ಲಿ ಅವರ ವಿವಾಹವಾಗಿದ್ದು, ಅವರು ಪ್ರವಾಸಿ ತಾಣಗಳಿಗೆ ತೆರಳಿ ಸಂಭ್ರಮ ಆಚರಿಸುವ ಬದಲು ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛತೆ ಮೂಲಕ ಗಮನ ಸೆಳೆದಿದ್ದರು. ಈ ವಿಚಾರ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ಬಂದು ಅವರದನ್ನು ತಮ್ಮ ಮನ್ ಕೀ ಬಾತ್‌ನಲ್ಲಿ ಉಲ್ಲೇಖ ಮಾಡಿದ್ದರು. ಇದೀಗ ಅವರಿಗೆ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಕಚೇರಿಯಿಂದ ಆಹ್ವಾನ ಬಂದಿದ್ದು, ಅವರು ಹೊಸದಿಲ್ಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.