ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಸಿದ್ಧತೆ
ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಪುತ್ತಿಲ ಪರಿವಾರದ ಮುಖ್ಯಸ್ಥರೂ ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿ ಸೇರುವುದು ಖಚಿತ ಎನ್ನಲಾಗಿದ್ದು ಬೆಂಗಳೂರಿನಲ್ಲೇ ಅರುಣ್ ಕುಮಾರ್ ಪುತ್ತಿಲ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಕುರಿತು ಬಿಜೆಪಿ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ.

ಬೆಂಗಳೂರಿನಲ್ಲಿ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇರ್ಪಡೆ ಕಾರ್ಯಕ್ರಮ ದೊಡ್ಡ ಮಟ್ಟದಲ್ಲಿ ನಡೆಯಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಅಗಲಿದ್ದಾರೆ ಎನ್ನಲಾಗುತ್ತಿದೆ.ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದಲ್ಲಿ ರಾಜ್ಯ ಬಿಜೆಪಿ ನಾಯಕರು ಯಶಸ್ವಿಯಾಗಿರುವ ಬೆನ್ನಲ್ಲೇ ಒಂದೆರಡು ದಿನಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಅವರೂ ಮತ್ತೆ ಬಿಜೆಪಿಗೆ ಸೇರುವುದು ಪಕ್ಕಾ ಎನ್ನಲಾಗುತ್ತಿದೆ.