ಪ್ರಧಾನಿ ಮೋದಿಯವರನ್ನು ಹಾಡಿ ಹೊಗಳಿದ ಜನಾರ್ದನ ರೆಡ್ಡಿ
ಪ್ರಧಾನಿ ನರೇಂದ್ರ ಮೋದಿಯವರನ್ನು ಶಾಸಕ ಜನಾರ್ದನ ರೆಡ್ಡಿಯವರು ಹಾಡಿ ಹೊಗಳಿದ್ದಾರೆ. ಆ ಮೂಲಕ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರ ಎನ್ನುವ ಪ್ರಶ್ನೆ ಕೇಳಿ ಬಂದಿದೆ.
ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ (Congress) ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು ಮೋದಿಯನ್ನು ಹೊಗಳಿದ್ದು ಶ್ರೀರಾಮಮಂದಿರ ನಿರ್ಮಾಣದಲ್ಲಿ ಮೋದಿಜೀಯವರನ್ನು ಅಭಿನಂದಿಸಬೇಕು. ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ. 500 ವರ್ಷದ ಹೋರಾಟಕ್ಕೆ ಫಲ ಇದೀಗ ಬಂದಿದೆ ಎಂದು ತಿಳಿಸಿದ್ದಾರೆ.