ರಾಜಕೀಯರಾಜ್ಯ

ಮರಳಿ ಬಿಜೆಪಿ ಸೇರ್ತಾರಾ ಸವದಿ?

ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಿಜೆಪಿಗೆ ಹೋಗುತ್ತಾರೆ ಎಂಬ ಚರ್ಚೆಗಳ ನಡುಯುತ್ತಿದೆ, ಅದರ ನಡುವೆ ಇದೀಗ ಸವದಿ ಅವರು ಬಿಜೆಪಿ ನಾಯಕರ ಜೊತೆಗೆ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ತಮ್ಮ ವಾಹನದಲ್ಲಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಬಿಜೆಪಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಜತೆಗೆ ಡಿಸಿಸಿ ಬ್ಯಾಂಕ್ ಸಾಮಾನ್ಯ ಸಭೆಗೆ ಬಂದಿದ್ದ ಸವದಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

ಇದು ಸದ್ಯ ಚರ್ಚೆಯ ವಿಷಯವಾಗಿದ್ದು ಸವದಿಯವರನ್ನು ಬಿಜೆಪಿಗೆ ಕರೆತರಲು ಒಂದು ಕಡೆ ಪ್ರಯತ್ನ ನಡೆಯುತ್ತಿದೆ ಎಎನ್ನುವ ಮಾತುಗಳು ಪ್ರಬಲವಾಗಿ ಕೇಳಿ ಬರುತ್ತಿದೆ. ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನಾನು ಕಾಂಗ್ರೆಸ್ ಪಕ್ಷದ ಚಿಹ್ನೆಯ ಮೇಲೆ ಆಯ್ಕೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷದ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಸವದಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!