ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಮಾಡಲು ಅನುಮತಿ ನೀಡಿದ ನ್ಯಾಯಾಲಯ
ವಾರಣಾಸಿ: ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಾಣಸಿಯ ನ್ಯಾಯಾಲಯವು ಬುಧವಾರದಂದು ಹಿಂದೂ ಧರ್ಮದವರಿಗೆ ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ಅನುಮತಿ ನೀಡಿದೆ.
ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಲಾಗಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಜಿಲ್ಲಾಡಳಿತವು ಏಳು ದಿನಗಳಲ್ಲಿ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ನ್ಯಾಯಾಲಯದ ಆದೇಶದ ಪ್ರಕಾರ, ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ.