ಕಡಬ: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ
ಕಡಬ: ಯುವಕನೋರ್ವ ಡೆಂಗ್ಯೂ ಜ್ವರ ಬಂಧಿಸಿ ಮೃತಪಟ್ಟ ಘಟನೆ ಕಡಬದಿಂದ ವರದಿಯಾಗಿದೆ.

ಕಡಬ ತಾಲೂಕು ಕುಟ್ರುಪಾಡಿ ಗ್ರಾಮದ ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31. ವ) ಮೃತಪಟ್ಟ ಯುವಕ.
ಶಿಜು ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ ಕಡಬದ ಖಾಸಗಿ ಮೆಡಿಕಲ್ ಸೆಂಟರ್‌ಗೆ ಚಿಕಿತ್ಸೆಗಾಗಿ ಆಗಮಿಸಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ನಂತರದಲ್ಲಿ ಮನೆಗೆ ಬಂದ ಬಳಿಕ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಯುವಕನನ್ನು ಪರೀಕ್ಷಿದ ವೈದ್ಯರು ಹೆಚ್ಚುವರಿ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಿಕೊಟ್ಟರು. ಆದರೆ ಮಂಗಳೂರಿನ ಆಸ್ಪತ್ರೆಗೆ ತಲುಪಿದ ವೇಳೆಗಾಗಲೇ ಯುವ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಯುವಕನಿಗೆ ಏಕಕಾಲಕ್ಕೆ ಡೆಂಗ್ಯೂ ಮತ್ತು ಮಲೇರಿಯಾ ಜ್ವರ ಬಾಧಿಸಿತ್ತು ಎನ್ನಲಾಗಿದೆ.