ರಾಷ್ಟ್ರೀಯ

ನಟಿ ಪೂನಂ ಪಾಂಡೆ ನಿಧನ



ಬಾಲಿವುಡ್ ನಟಿ, ಮಾಡೆಲ್, ಪೂನಂ ಪಾಂಡೆ ನಿಧನರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಗುರುವಾರ ತಡರಾತ್ರಿ ಕಾನ್ಪುರದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

32 ವರ್ಷದ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್ ಎದುರಿಸುತ್ತಿದ್ದರು. ಪೂನಂ ಪಾಂಡೆ ತಂಡವು ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೆಯನ್ನು ನೀಡಲಾಗಿದ್ದು ಅದರಲ್ಲಿ ‘ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ಘೋಷಿಸಲು ನಮಗೆ ದುಃಖವಾಗಿದೆ ಎಂದು ಬರೆದುಕೊಂಡಿದ್ದಾರೆ. ಪೂನಂ ಪಾಂಡೆ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಪೂನಂ ಪಾಂಡೆ ವಿವಾದಗಳಿಂದಲೂ ಹಲವು ಬಾರಿ ಸುದ್ದಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!