ರಾಷ್ಟ್ರೀಯ

ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ



ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಶ್ರೇಷ್ಠ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಚಿತ್ರ: ಅಡ್ವಾಣಿ ಹಾಗೂ ಮೋದಿ

ಎಲ್ ಕೆ ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!