ಕರಾವಳಿರಾಜಕೀಯ

ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶದ ಪೂರ್ವಭಾವಿ ಸಭೆ
ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಾಗ ಅದನ್ನು ಬಿಜೆಪಿ ಅಪಹಾಸ್ಯ ಮಾಡಿತ್ತು , ಈ ಯೋಜನೆ ಜನರನ್ನು ಸೋಮಾರಿಯನ್ನಾಗಿ ಮಾಡುತ್ತದೆ ಎಂದು ಗೇಲಿ ಮಾಡುತ್ತಿದ್ದರು ಆದರೆ ಕಾಂಗ್ರೆಸ್ ಗ್ಯಾರಂಟಿಯನ್ನು ಪ್ರಧಾನಿ ಮೋದಿಯವರು ಕಾಪಿ ಮಾಡುತ್ತಿದ್ದಾರೆ. ಪ್ರಧಾನಿಗಳು ನಮ್ಮ ಸಿದ್ದರಾಮಯ್ಯರ ಯೋಜನೆಯನ್ನು ಪುರಸ್ಕರಿಸಿ ಅದನ್ನು ಅವರೇ ನೀಡಲು‌ ಮುಂದಾಗಿದ್ದು ಸಿದ್ದರಾಮಯ್ಯರು ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.


ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ಬಡವರಿಗೆ ಗ್ಯಾರಂಟಿ ಯೋಜನೆಯನ್ನು ಕಾಂಗ್ರೆಸ್ ನೀಡಿದೆ. ಸರಕಾರದ ಯೋಜನೆ ಕಟ್ಟಕಡೇಯ ವ್ಯಕ್ತಿಗೂ ತಲುಪಿದೆ. ಜನತೆ ಪ್ರಯೋಜನವೂ ಆಗಿದೆ. ಗೇಲಿ ಮಾಡಿದವರಿಗೆ ಇದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಗೇಲಿ ಮಾಡುತ್ತಾ ಇರುವಾಗಲೇ ಅದೇ ಯೋಜನೆಯನ್ನು ಮೋದಿ ಜಾರಿ ಮಾಡಲು ಮುಂದಾಗಿದ್ದು ದೇಶದ ಅಭಿವೃದ್ದಿಗೆ ಕಾಂಗ್ರೆಸ್ ಅನಿವಾರ್ಯ ಎಂಬುದು ಎಲ್ಲರಿಗೂ ಗೊತ್ತಾಗಿದೆ ಎಂದು ಹೇಳಿದರು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಶಾಸಕರಾದ ಅಶೋಕ್ ರೈ, ಮಾಜಿ ಸಚಿವ ವಿನಯಕುಮಾರ್ ಸೊರಕೆ,ರಮಾನಾಥ ರೈ,ಮಂಜುನಾಥ ಭಂಡಾರಿ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

error: Content is protected !!