ಸುಳ್ಯ ಬಿಜೆಪಿ ಮಂಡಲ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ನೇಮಕವಾದ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನ ಸ್ಫೋಟ
ಸುಳ್ಯ ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಇರುವ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಪಕ್ಷದ ಪ್ರಮುಖರು ಸಭೆ ನಡೆಸಿದ್ದಾರೆ.
ಕೋರ್ ಕಮಿಟಿ ಶಿಫಾರಸ್ಸು ಮಾಡಿದವರನ್ನು ಅಧ್ಯಕ್ಷರನ್ನಾಗಿ ಮಾಡದಿರುವುದು ಸುಳ್ಯದ ಪ್ರಮುಖರ ಅಸಮಾಧಾನಕ್ಕೆ ಕಾರಣವಾಗಿದ್ದು ಇಂದು ಕ್ಷೇತ್ರದ ಬಿಜೆಪಿ ಪ್ರಮುಖರ ಸಭೆ ಬಿಜೆಪಿ ಮಂಡಲ ಸಮಿತಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕ್ಷೇತ್ರದ ಪ್ರಮುಖರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಮಂಡಲ ಸಮಿತಿಯಿಂದ ಅಧ್ಯಕ್ಷ ಸ್ಥಾನಕ್ಕೆ ವಿನಯ ಮುಳುಗಾಡು ಅವರ ಹೆಸರನ್ನು ಜಿಲ್ಲಾ ಸಮಿತಿಗೆ ಕಳುಹಿಸಲಾಗಿತ್ತು. ಆದರೆ ಪಟ್ಟಿಯಲ್ಲಿ ಇಲ್ಲದ ವೆಂಕಟ್ ವಳಲಂಬೆಯವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿ ಪಕ್ಷದಲ್ಲಿ ತಲೆದೋರಿರುವ ಭಿನ್ನಮತ ವಿಚಾರ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.