ಮಡಿಕೇರಿ: ಯುವಕನ ಕೊಲೆ
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಯುವಕನೋರ್ವನನ್ನು ಕೊಲೆ ಮಾಡಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ ಎನ್ನಲಾಗಿದೆ.
22 ವರ್ಷದ ಸಾಜಿದ್ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್ ನಲ್ಲಿ ಬೈಕ್ ಸರ್ವಿಸ್ ಮಾಡಲೆಂದು ಸಾಜೀದ್ ಬಂದಿದ್ದನು. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ.
ಈ ವೇಳೆ ಕೋಪಗೊಂಡ ಶ್ರೀನಿಧಿ ಹರಿತವಾದ ಆಯುಧದಿಂದ ಸಾಜಿದ್ ಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಾಜಿದ್ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕುಶಾಲನಗರ ಟೌನ್ ಠಾಣಾ ಪೊಲೀಸರು ಆರೋಪಿ ಶ್ರೀನಿಧಿನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.