ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗೆ ಪಕ್ಷ ಬೇಧ ಮರೆತು ಬೆಂಬಲಿಸಲು ಸಿಎಂ ಸಿದ್ದರಾಮಯ್ಯ ಮನವಿ
ದೆಹಲಿಯ ಜಂತರ್‌ಮಂತರ್‌ನಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಗೆ ಪಕ್ಷ ಬೇಧ ಮರೆತು ಎಲ್ಲರೂ ಕೈ ಜೋಡಿಸಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಿದ್ಧರಾಮಯ್ಯ ಆಹ್ವಾನ ನೀಡಿದ್ದಾರೆ.
ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಈ ಪ್ರತಿಭಟನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.
ತೆರಿಗೆ ಪಾಲು ಹಂಚಿಕೆ, ಅನುದಾನ, ನೆರವು ನೀಡಿಕೆಯ ವಿಷಯದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ