ಸುಳ್ಯ ಆಸ್ಪತ್ರೆಯ ಮಹಡಿಯಿಂದ ಜಿಗಿದು ತಿಂಗಳಾಡಿಯ ವ್ಯಕ್ತಿ ಆತ್ಮಹತ್ಯೆ
ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಾಗಿದ್ದ ಪುತ್ತೂರು ತಾಲೂಕು ತಿಂಗಳಾಡಿ ಮೂಲದ ವಸಂತ (50. ವ) ಇಂದು ಮುಂಜಾನೆ ಆರು ಗಂಟೆಗೆ ಆಸ್ಪತ್ರೆಯ ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಮೂರ್ಛೆ ರೋಗ ಕಾಯಿಲೆಗೆ ತುತ್ತಾಗುತ್ತಿದ್ದರು ಎನ್ನಲಾಗಿದೆ. ಮೃತರು ಪತ್ನಿ ಗೀತಾ, ಪುತ್ರ ನಾಗೇಶ್, ಪುತ್ರಿಯರಾದ ನಳಿನಿ ಹಾಗೂ ನಯನ ಎಂಬುವರನ್ನು ಅಗಲಿದ್ದಾರೆ.
ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ದೇಹವನ್ನು ಇರಿಸಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.