ರಾಜಕೀಯರಾಷ್ಟ್ರೀಯ

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಎಸಗಿದೆ-ಸಿದ್ದರಾಮಯ್ಯ



ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಎಸಗಿದೆ. ಈ ವಿಚಾರದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಆಗಿದೆ. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ, ಇದು ರಾಜಕೀಯ ಚಳವಳಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಯೋಜಿಸಿರುವ ʼದೆಹಲಿ ಚಲೋʼ ಪ್ರತಿಭಟನೆಗೂ ಮೊದಲು ಮಾಧ್ಯಮದ ಜೊತೆ ಮಾತನಾಡಿದ ಅವರು ಕನ್ನಡಿಗರ ಹಿತ ಕಾಪಾಡುವ ಐತಿಹಾಸಿಕ ಚಳುವಳಿಯಾಗಿದ್ದು, ನಮ್ಮ ಎಲ್ಲ ಶಾಸಕರು, ಸಚಿವರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ರಾಜ್ಯದ ಸಂಸದರಿಗೂ ಪತ್ರ ಬರೆದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!