ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸಹಿತ ಶಾಸಕರು, ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು, ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಕೂಗಲಾಯಿತು.