ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಸಿಐಡಿ ತನಿಖೆಗೆ-ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ
ಕಾರ್ಕಳ ತಾಲೂಕಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಕಾಮಗಾರಿ ಅವ್ಯವಹಾರ ತನಿಖೆಗೆ ಭಾರಿ ಆಗ್ರಹ ವ್ಯಕ್ತವಾಗಿತ್ತು.