ಲೋಕಸಭೆ ಚುನಾವಣೆಗೆ ಮೊದಲು ಪೌರತ್ವ ತಿದ್ದುಪಡಿ ಕಾಯಿದೆ ಜಾರಿ: ಅಮಿತ್ ಶಾ
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ಯನ್ನು ಲೋಕಸಭೆ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ. ಇದು ಯಾರೊಬ್ಬರ ಭಾರತೀಯ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ,” ಎಂದು ಅವರು ಹೇಳಿದ್ದಾರೆ.