ಇಂಟಕ್ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು ಪುನರಾಯ್ಕೆ
ಪುತ್ತೂರು: ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕ ಇಂಟಕ್‌ನ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು ಪುನರಾಯ್ಕೆಯಾಗಿದ್ದಾರೆ.
ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ ಅವರು ಪುನರಾಯ್ಕೆಗೊಳಿಸಿ ಆದೇಶಿಸಿದ್ದಾರೆ.
ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿಯಾಗಿರುವ ಜಯಪ್ರಕಾಶ್ ಅವರು ಪ್ರಸ್ತುತ ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದು, ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷರಾಗಿ, ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾಗಿ, ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ, ಜಯಕರ್ನಾಟಕ ಕೋಡಿಂಬಾಡಿ ಘಟಕದ ಗೌರವಾಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.