ರಾಜಕೀಯರಾಷ್ಟ್ರೀಯ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್‌ ಚವ್ಹಾಣ್‌ ಬಿಜೆಪಿಗೆ ಸೇರ್ಪಡೆನವದೆಹಲಿ: ಕಾಂಗ್ರೆಸ್ ನಾಯಕ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವ್ಹಾಣ್‌ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಅವರ ಸಮ್ಮುಖದಲ್ಲಿ ಚವ್ಹಾಣ್‌ ಬಿಜೆಪಿಗೆ ಸೇರಿದ್ದಾರೆ.

ಚವ್ಹಾಣ್‌ ಅವರು ರಾಜ್ಯದ ಮರಾಠವಾಡ ಪ್ರದೇಶದ ನಾಂದೇಡ್ ಜಿಲ್ಲೆಯಿಂದ ಎರಡು ಬಾರಿ ಸಂಸದರಾಗಿ ಮತ್ತು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

‘ನಾನು ಇಂದು ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಹೊಸ ಅಧ್ಯಾಯವನ್ನು ಆರಂಭಿಸುತ್ತಿದ್ದೇನೆ. ನನ್ನ ಮತ್ತು ಕಾಂಗ್ರೆಸ್ ನಡುವಿನ ಅಧ್ಯಾಯ ಮುಗಿದಿದೆ. ನಾನು ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ’ ಎಂದು ಚವ್ಹಾಣ್‌ ಹೇಳಿದ್ದಾರೆ.

ಅಶೋಕ್‌ ಚವ್ಹಾಣ್‌ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ಅವರಿಗೆ ಪತ್ರದ ಮೂಲಕ ಚವ್ಹಾಣ್‌ ತಿಳಿಸಿದ್ದರು. ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿರುವ ಅವರು, ರಾಜ್ಯ ವಿಧಾನಸಭೆಯ ಸ್ಪೀಕರ್‌ ರಾಹುಲ್ ನಾರ್ವೇಕರ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!