ತಾಯಿ, ಮಗಳು ಆತ್ಮಹತ್ಯೆ
ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್ ಬಳಿಯ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.