ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳನ್ನು ನಿಯೋಜಿಸಿ ಆರೋಗ್ಯ ಸಚಿವರ ಆದೇಶ
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿದ್ದು ಕೇವಲ ಒಬ್ಬರೇ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಹೆಚ್ಚುವರಿ ವೈದ್ಯರನ್ನು ನೇಮಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರಲ್ಲಿ ಸಾರ್ವಜನಿಕರು ಮನವಿ ಮಾಡಿದ್ದರು. ಆರೋಗ್ಯ ಕೇಂದ್ರದ ವೈದ್ಯರ ಕೊರತೆ ಬಗ್ಗೆ ಶಾಸಕರು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ತಂದಿದ್ದರು. ಶಾಸಕರ ಮನವಿಯನ್ನು ಪರಿಗಣಿಸಿದ ಆರೋಗ್ಯ ಸಚಿವರು ವಾರದಲ್ಲಿ ಎರಡೆರಡು ದಿನಗಳಂತೆ ಹತ್ತಿರದ ಆಸ್ಪತ್ರೆಯಿಂದ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳ ತಜ್ಞರನ್ನು ಹೆಚ್ಚುವರಿ ಸೇವೆಗೆ ನಿಯೋಜನೆ ಮಾಡುವಂತೆ ಆದೇಶಿಸಿದ್ದಾರೆ. ಜೊತೆಗೆ ಒಬ್ಬರು ಅರಿವಳಿಕೆ ತಜ್ಞರನ್ನು ನಿಯೋಜನೆ ಮಾಡುವಂತೆಯೂ ಆದೇಶಿಸಿದ್ದಾರೆ.
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ಕೊರತೆಯ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದರು. ಕಳೆದ ಹಲವು ವರ್ಷಗಳಿಂದ ಇಲ್ಲಿ ವೈದ್ಯರ ಕೊರತೆ ಉಮಟಾಗಿದ್ದು ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳಿಗೆ ತೊಂದರೆಯಾಗಿತ್ತು. ಇದೀಗ ಆರೋಗ್ಯ ಸಚಿವರು ವಾರದಲ್ಲಿ ಎರಡೆರಡು ದಿನ ಮೂವರು ವೈದ್ಯರನ್ನು ಹೆಚ್ಚುವರಿಯಾಗಿ ನಿಯೋಜನೆ ಮಾಡಿರುವುದರಿಂದ ಹಲವು ವರ್ಷಗಳ ಸಮಸ್ಯೆ ಇತ್ಯರ್ಥವಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿಗೆ ಖಾಯಂ ವೈದ್ಯರನ್ನು ನೇಮಕಾತಿ ಮಾಡುವಲ್ಲಿ ಶ್ರಮಿಸುತ್ತೇನೆ.
ಎಂದು ಶಾಸಕ ಅಶೊಕ್ ಕುಮಾರ್ ರೈ ತಿಳಿಸಿದ್ದಾರೆ.