ಬಂಟ್ವಾಳ: ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ
ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪಡಸಾಕೆಹಟ್ಟಿ ನಿವಾಸಿ ನಯನಾ (27.ವ) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಚಲಿಸುತ್ತಿದ್ದ ಸಂದರ್ಭ ತಾನು ಕುಳಿತಿದ್ದ ಸೀಟ್ ನಲ್ಲಿ ಬ್ಯಾಗ್ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.