ಮಂಗಳೂರು: ಶಾಸಕರ ವಿರುದ್ದ ಪ್ರಕರಣ ದಾಖಲು- ನಳಿನ್ ಕುಮಾರ್ ಹೇಳಿದ್ದೇನು..?
ಮಂಗಳೂರು: ಶಾಲಾ ಶಿಕ್ಷಕಿಯಿಂದ ಹಿಂದೂ ಧರ್ಮ ಅವಹೇಳನ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶಾಸಕರು ಸೇರಿ ಐವರ ವಿರುದ್ಧ ಕೇಸು ದಾಖಲಿಸಿರುವುದನ್ನು ವಾಪಸ್ ಪಡೆಯಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಕೇಸ್ ವಾಪಸ್ ಪಡೆಯಲು ನಾವು ಕಾಂಗ್ರೆಸ್ ಎದುರು ಭಿಕ್ಷೆ ಬೇಡುವುದಿಲ್ಲ. ಸಾರ್ವಜನಿಕವಾಗಿ ಹೋರಾಟ ನಡೆಸುವ ಮೂಲಕ ಎದುರಿಸುತ್ತೇವೆ ಎಂದರು.
ಶಿಕ್ಷಣ ಇಲಾಖೆ ಅಧಿಕಾರಿಯ ವರ್ಗಾವಣೆ ರದ್ದುಪಡಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ನಳಿನ್ ಕುಮಾರ್ ಎಚ್ಚರಿಸಿದ್ದಾರೆ.